5ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.
6ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.
7ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
8ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
9ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
10ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.