Text copied!
Bibles in Kannada

ಕೀರ್ತ 77:12-18 in Kannada

Help us?

ಕೀರ್ತ 77:12-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
13 ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
14 ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
15 ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. ಸೆಲಾ
16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
17 ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
ಕೀರ್ತ 77 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019