Text copied!
Bibles in Kannada

ಕೀರ್ತ 77:3-10 in Kannada

Help us?

ಕೀರ್ತ 77:3-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
5 ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ
10 ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
ಕೀರ್ತ 77 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019