Text copied!
Bibles in Kannada

ಕೀರ್ತ 78:18-22 in Kannada

Help us?

ಕೀರ್ತ 78:18-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
19 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
20 ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.
21 ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
22 ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019