Text copied!
Bibles in Kannada

ಕೀರ್ತ 78:19-33 in Kannada

Help us?

ಕೀರ್ತ 78:19-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
20 ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.
21 ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
22 ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
23 ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,
24 ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.
25 ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.
26 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
28 ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
29 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
30 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
31 ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
33 ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019