Text copied!
Bibles in Kannada

ಕೀರ್ತ 78:26-33 in Kannada

Help us?

ಕೀರ್ತ 78:26-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
28 ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
29 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
30 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
31 ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
33 ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019