Text copied!
Bibles in Kannada

ಕೀರ್ತ 78:35-44 in Kannada

Help us?

ಕೀರ್ತ 78:35-44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
36 ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
38 ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
39 ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.
40 ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
41 ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.
42 ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
43 ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
44 ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019