Text copied!
Bibles in Kannada

ಕೀರ್ತ 78:41-48 in Kannada

Help us?

ಕೀರ್ತ 78:41-48 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.
42 ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
43 ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
44 ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
45 ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.
46 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
47 ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
48 ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019