Text copied!
Bibles in Kannada

ಕೀರ್ತ 78:49-55 in Kannada

Help us?

ಕೀರ್ತ 78:49-55 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
50 ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.
51 ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
52 ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
53 ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;
54 ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
55 ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019