2ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
3ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.
4ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
5ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
6ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.
7ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.
8ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
9ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.