Text copied!
Bibles in Kannada

ಕೀರ್ತ 79:8-13 in Kannada

Help us?

ಕೀರ್ತ 79:8-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
9 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
10 ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.
11 ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
12 ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.
13 ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
ಕೀರ್ತ 79 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019