7ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.
8ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
9ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.