Text copied!
Bibles in Kannada

ಕೀರ್ತ 7:9-13 in Kannada

Help us?

ಕೀರ್ತ 7:9-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
10 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.
11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
12 ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
13 ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.
ಕೀರ್ತ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019