Text copied!
Bibles in Kannada

ಕೀರ್ತ 80:4-10 in Kannada

Help us?

ಕೀರ್ತ 80:4-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?
5 ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.
6 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
8 ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
ಕೀರ್ತ 80 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019