Text copied!
Bibles in Kannada

ಕೀರ್ತ 80:5-17 in Kannada

Help us?

ಕೀರ್ತ 80:5-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.
6 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
8 ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
11 ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.
12 ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
14 ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.
ಕೀರ್ತ 80 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019