Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 80

ಕೀರ್ತ 80:9-17

Help us?
Click on verse(s) to share them!
9ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
10ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
11ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.
12ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
13ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
14ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
15ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
16ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
17ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.

Read ಕೀರ್ತ 80ಕೀರ್ತ 80
Compare ಕೀರ್ತ 80:9-17ಕೀರ್ತ 80:9-17