Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 81

ಕೀರ್ತ 81:1-13

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
2ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
3ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
4ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.
5ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
6“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
7ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.
8ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
11ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
12ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
13ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!

Read ಕೀರ್ತ 81ಕೀರ್ತ 81
Compare ಕೀರ್ತ 81:1-13ಕೀರ್ತ 81:1-13