7ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.
8ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.