1ಆಸಾಫನ ಕೀರ್ತನೆ. ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
2“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
3ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
4ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”