Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 83

ಕೀರ್ತ 83:10-16

Help us?
Click on verse(s) to share them!
10ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
11ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
12ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.
13ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
14ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
15ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.
16ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.

Read ಕೀರ್ತ 83ಕೀರ್ತ 83
Compare ಕೀರ್ತ 83:10-16ಕೀರ್ತ 83:10-16