Text copied!
Bibles in Kannada

ಕೀರ್ತ 83:3-15 in Kannada

Help us?

ಕೀರ್ತ 83:3-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,
4 “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.
5 ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,
6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
7 ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
8 ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ
9 ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.
10 ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
11 ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
12 ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.
13 ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
14 ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
15 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.
ಕೀರ್ತ 83 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019