7ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
8ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ
9ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.
10ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
11ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
12ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.
13ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
14ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
15ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.