Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 84

ಕೀರ್ತ 84:1-5

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
2ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
3ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
4ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ
5ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ,

Read ಕೀರ್ತ 84ಕೀರ್ತ 84
Compare ಕೀರ್ತ 84:1-5ಕೀರ್ತ 84:1-5