3ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
4ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ
5ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ,
6ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
7ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
8“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. ಸೆಲಾ
9ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.
10ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.