Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 84

ಕೀರ್ತ 84:7-11

Help us?
Click on verse(s) to share them!
7ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
8“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. ಸೆಲಾ
9ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.
10ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
11ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

Read ಕೀರ್ತ 84ಕೀರ್ತ 84
Compare ಕೀರ್ತ 84:7-11ಕೀರ್ತ 84:7-11