Text copied!
Bibles in Kannada

ಕೀರ್ತ 85:7-12 in Kannada

Help us?

ಕೀರ್ತ 85:7-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
10 ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
11 ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
ಕೀರ್ತ 85 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019