Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 86

ಕೀರ್ತ 86:1-8

Help us?
Click on verse(s) to share them!
1ದಾವೀದನ ಕೀರ್ತನೆ. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.
2ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.
3ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.
4ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.
5ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
6ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.
7ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
8ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.

Read ಕೀರ್ತ 86ಕೀರ್ತ 86
Compare ಕೀರ್ತ 86:1-8ಕೀರ್ತ 86:1-8