Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 86

ಕೀರ್ತ 86:3-14

Help us?
Click on verse(s) to share them!
3ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.
4ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.
5ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
6ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.
7ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
8ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.
9ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
10ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.
11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.
12ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.
13ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.
14ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.

Read ಕೀರ್ತ 86ಕೀರ್ತ 86
Compare ಕೀರ್ತ 86:3-14ಕೀರ್ತ 86:3-14