3ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
4“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
5ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.