Text copied!
Bibles in Kannada

ಕೀರ್ತ 89:1-5 in Kannada

Help us?

ಕೀರ್ತ 89:1-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.
2 ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
3 ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
4 ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ
5 ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019