Text copied!
Bibles in Kannada

ಕೀರ್ತ 89:15-20 in Kannada

Help us?

ಕೀರ್ತ 89:15-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
16 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
17 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.
18 ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.
19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
20 ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019