Text copied!
Bibles in Kannada

ಕೀರ್ತ 89:20-25 in Kannada

Help us?

ಕೀರ್ತ 89:20-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
21 ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
22 ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.
23 ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
24 ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.
25 ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019