Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 89

ಕೀರ್ತ 89:26-48

Help us?
Click on verse(s) to share them!
26ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.
27ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
28ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
29ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
30ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,
31ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
32ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.
33ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
34ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.
35ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
36ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
37ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ.
38ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
39ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
40ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
41ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
42ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
43ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
44ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
45ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ
46ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
47ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
48ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ

Read ಕೀರ್ತ 89ಕೀರ್ತ 89
Compare ಕೀರ್ತ 89:26-48ಕೀರ್ತ 89:26-48