Text copied!
Bibles in Kannada

ಕೀರ್ತ 89:39-52 in Kannada

Help us?

ಕೀರ್ತ 89:39-52 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
40 ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
41 ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
42 ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
43 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
44 ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
45 ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ
46 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
47 ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
48 ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ
49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
50 ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
51 ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.
52 ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019