49ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
50ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
51ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.