Text copied!
Bibles in Kannada

ಕೀರ್ತ 89:6-10 in Kannada

Help us?

ಕೀರ್ತ 89:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
7 ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
8 ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
10 ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019