4ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
5ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
6ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
7ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
8ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
9ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.