9ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
10ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
11ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
12ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
13ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
14ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.