Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 91

ಕೀರ್ತ 91:5-14

Help us?
Click on verse(s) to share them!
5ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,
6ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
7ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
8ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
9ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
10ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
11ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
12ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
13ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.
14ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.

Read ಕೀರ್ತ 91ಕೀರ್ತ 91
Compare ಕೀರ್ತ 91:5-14ಕೀರ್ತ 91:5-14