Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 92

ಕೀರ್ತ 92:2-11

Help us?
Click on verse(s) to share them!
2ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
3ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
8ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
10ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
11ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.

Read ಕೀರ್ತ 92ಕೀರ್ತ 92
Compare ಕೀರ್ತ 92:2-11ಕೀರ್ತ 92:2-11