3ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
8ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.