11ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
12ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
13ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
14ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
15ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.