Text copied!
Bibles in Kannada

ಕೀರ್ತ 94:15-21 in Kannada

Help us?

ಕೀರ್ತ 94:15-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
16 ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
17 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
19 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
20 ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?
21 ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
ಕೀರ್ತ 94 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019