5ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
6ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
7ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
8ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
9ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
10ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?