Text copied!
Bibles in Kannada

ಕೀರ್ತ 94:7-19 in Kannada

Help us?

ಕೀರ್ತ 94:7-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
8 ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
9 ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
10 ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
11 ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
12 ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
13 ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
14 ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
15 ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
16 ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
17 ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18 ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
19 ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
ಕೀರ್ತ 94 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019