Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ

ಕೀರ್ತ 95

Help us?
Click on verse(s) to share them!
1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
2ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
3ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
4ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
5ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
6ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.
7ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
8ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
10ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
11ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.