1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
2ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
3ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
4ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
5ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.