Text copied!
Bibles in Kannada

ಕೀರ್ತ 95:3-7 in Kannada

Help us?

ಕೀರ್ತ 95:3-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
4 ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
5 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.
7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
ಕೀರ್ತ 95 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019