3ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
4ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
5ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
6ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
7ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.