5ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
6ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
7ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
8ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.